ಕಲಬುರಗಿ, ದೇಶದಕಲ್ಲಿ ನೆಲೆಯೂರಿರುವ ವೈವಿಧ್ಯಮಯ ಸಂಸ್ಕøತಿಯನು ಗೌರವಿಸುವುದರ ಜೊತೆಗೆ ಜಾತಿ,. ಧರ್ಮ, ವರ್ಣರಹಿತ ಜಾತ್ಯತೀತ ಮನೋಭಾವನೆಯೊಂದಿಗೆ ಸರ್ವರ ಪ್ರಗತಿಗೆ ದಾರದೀಪದಂತಹ ಸಂವಿಧಾನ ನೀಡಿ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರಾಗಿದ್ದಾರೆ ಹೈದ್ರಾಬಾದ ಕೇಂದ್ರೀಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರು ಹಾಗೂ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಕೆ.ವಾಯ್. ರತ್ನಮ್ ಅವರು ಎಂದರು.
ಬುಧವಾರ ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರ ಇವರ ಸಹಯೋಗದಲ್ಲಿ ವಿವಿ.ಯ. ಕಾರ್ಯಸೌಧದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಆಯೋಜಿಸಿದ 76ನೇ ಸಂವಿಧಾನ ದಿನಾಚರಣೆ ನಿಮಿತ್ತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದಂತಹ ದೇಶವನ್ನು ಜಾತಿ, ಧರ್ಮ ರಹಿತ ರಾಷ್ಟ್ರ ನಿರ್ಮಾಣಕ್ಕೆ ವಿವಿಧ ದೇಶಗಳ ಸಂವಿದಾನವನ್ನು ಅಧ್ಯಯನವನ್ನು ಮಾಡಿ ದರಲ್ಲಿ ಪ್ರಮುಖ ಅಂಶಗಳನ್ನು ತೆಗೆದುಕೊಂಡು ದೇಶಕ್ಕೆ ಬೃಹತ್ ಸಂವಿಧಾನ ನೀಡಿದ್ದು ಶ್ರೇಯಸ್ಸು ಅಮಬೇಡ್ಕರ್ ಅವರಿಗೆ ಸಲ್ಲುತ್ತದೆ. ಸಂವಿಧಾನ ಕರಡು ಸಮಿತಿಯಲಿ ಏಳು ಜನ ಸದಸ್ಯರಿದ್ದರು ಸಹ ಕಾಲಾಂತರದಲ್ಲಿ ಬಹುತೇಕರು ರಚನಾ ಕಾರ್ಯದಲ್ಲಿ ಅಲಭ್ಯರಾದ ಪರಿಣಾಮ ಅಂಬೇಡ್ಕರ್ ಅವರು ಮುಮಚೂಣಿಯಲಿ ನಿಂತು ಇದನ್ನು ದೇಶಸಕ್ಕ ಸಮರ್ಪಣೆ ಮಾಡಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಸಂವಿದಾನದ ಪೀಠಿಕೆಯಲ್ಲಿನ ಪ್ರತಿಯೊಂದು ಪದಗಳು ಬಹಳಷ್ಟು ವಿಶಾಲವಾದ ಅರ್ಥವನ್ನು ನೀಡುತ್ತವೆ. ಸಮ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ನಮಗೆ ಪ್ರೇರಣೆಯಾಗಿದೆ. ವಿದ್ಯಾರ್ಥಿ ಸಮುದಾಯ ಅಂಬೇಡ್ಕರ ಅವರ ವಿಚಾರಧಾರೆಗಳನ್ನು ಅರಿತುಕೊಳ್ಳಬೇಕು ಮತ್ತು ಹೆಚ್ಚು ಪಸರಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಶಶಿಕಾಂತ ಎಸ್. ಉಡಿಕೇರಿ ಮಾತನಾಡಿ, ಸಂವಿಧಾನ ಜಾರಿಯಿಂದಲೆ ಇಂದು ಪ್ರತಿಯೊಬ್ಬರು ಶಿಕ್ಷಣವನ್ನು ಪಡೆಯಲು ಸಾಧ್ಯವಾಗಿದೆ. ಶಿಕ್ಷಣವೆಂಬುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೆಬೇಕು ಎಂಬ ಮಾತಿನಂತೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಅಧ್ಯಯನವನ್ನು ಮಾಡುವುದರ ಮೂಲಕ ಹೆಚ್ಚಿನ ಜ್ಞಾನವನ್ನು ಸಂಪಾದನೆಯನ್ನು ಮಾಡಬೇಕು. ಇಂದಿನ ಸಮಾಜದಲ್ಲಿಯು ಕಾಣಬಹುದಾದ ಅಸಮಾನತೆ, ಜೀತ ಪದ್ದತಿ ನಿರ್ಮೂಲನೆ, ಮರ್ಯಾದೆ ಹತ್ಯೆಗಳು ಹೋಗಲಾಡಿಸಲು ಶ್ರಮಿಸಬೇಕು ಎಂದರು.
ರಾಷ್ಟ್ರೀಯ ವಿಚಾರ ಸಂಕಿರಣ ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದ ಡೀನ್ ಪೆÇ್ರ. ರಾಜನಾಳ್ಕರ್ ಲಕ್ಷ್ಮಣ್ ಇವರ ಅಧ್ಯಕ್ಷತೆಯಲ್ಲಿÀ್ಜರುಗಿದ ಮುಖ್ಯ ಗೋಷ್ಠಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪದವಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಂಶುಪಾಲ ಡಾ.ಐ.ಎಸ್. ವಿದ್ಯಾಸಾಗರ ಅವರು “ಸಂವಿಧಾನದ ರಚನೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪಾತ್ರ” ಹಾಗೂ ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವರಾಜ ಅವರು “ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿಕಲ್ಪನೆಯಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರೇರಣೆಯಾಗಿ ಭಾರತದ ಸಂವಿಧಾನ” ಕುರಿತು ಮಾತನಾಡಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಪೆÇ್ರ.ಚಂದ್ರಕಾಂತ ಯಾತನೂರ ಅವರು ಸರ್ವರನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಶೋಧನಾ ವಿದ್ಯಾರ್ಥಿ ಮಹೇಶ್ವರಿ ಎಸ್. ಚೆನ್ನಪ್ಪಗೊಳ ಮತ್ತು ಅತಿಥಿ ಉಪನ್ಯಾಸಕ ಡಾ.ಶಿವಾನಂದ ಕಡಗಂಚಿ ನಿರೂಪಿಸಿದರು. ಸರ್ಕಾರಿ ಪದವಿ ಕಾಲೇಜಿನ (ಸ್ವಾಯತ್ತ) ಡಾ.ಅನಿಲಕುಮಾರ ಹಾಲು ವಂದಿಸಿದರು. ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ರಾಘವೇಂದ್ರ ಎಮ್.ಭೈರಪ್ಪ, ವಿದ್ಯಾ ವಿಷಯಕ ಪರಿಷತ್ ಸದಸ್ಯ ಪೆÇ್ರ. ಎಸ್.ಎನ್. ಗಾಯಕ್‍ವಾಡ್, ಕುಲಸಚಿವ ಪ್ರೊ. ರಮೇಶ ಲಂಡನಕರ್, ಮೌಲ್ಯಮಾಪನ ಕುಲಸಚಿವ ಡಾ. ನಿಂಗಣ್ಣ ಕಣ್ಣೂರ, ಹಣಕಾಸು ಅಧಿಕಾರಿ ಜಯಾಂಬಿಕಾ ಸೇರಿದತೆ ಇತರೆ ಬೋಧಕ-ಬೋಧಕೇತರ ವೃಂದದ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಮಾಜದಲ್ಲಿ ಸಮಾನತೆಗೆ ಶ್ರಮಿಸಿದ ಮಹಾನ್ ಚೇತನ ಡಾ.ಬಿ.ಆರ್. ಅಂಬೇಡ್ಕರ್ -ಕೆ.ವಾಯ್ ರತ್ನಮ್


