ಕಲಬುರಗಿ,ರಾಜ್ಯದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ಐ.ಟಿ.ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ನಂತರ ವಿವಿಧ ತುಕಡಿಗಳನ್ನು ಪರಿವೀಕ್ಷಿಸಿದರು.
ಪರೇಡ್ ಕಮಾಂಡರ್ ಡಿ.ಎ.ಆರ್ ಆರ್.ಪಿ.ಐ ಮಲ್ಲಯ್ಯ, ಸಹಾಯಕ ಪರೇಡ್ ಕಮಾಂಡರ್ ಡಿ.ಎ.ಆರ್ ಆರ್.ಎಸ್.ಐ ದುರ್ಗಸಿಂಹ ನೇತೃತ್ವದಲ್ಲಿ ಕಲಬುರಗಿ ನಗರ ಸಿ.ಎ.ಆರ್. ಘಟಕ, ಸಿವಿಲ್ ಕಲಬುರಗಿ ಜಿಲ್ಲೆ (ಪುರುಷ), ಸಿವಿಲ್ ಕಲಬುರಗಿ ನಗರ (ಪುರುಷ), ಸಿವಿಲ್ ಕಲಬುರಗಿ ನಗರ ಮತ್ತು ಜಿಲ್ಲೆ (ಮಹಿಳೆ), ಕೆ.ಎಸ್.ಆರ್.ಪಿ 6ನೇ ಪಡೆ, ಪ್ರತಿಭಾನ್ವಿತ ಬಾಲಕಿಯರ ಶಾಲೆ (ಭಾರತ ಸೇವಾ ದಳ ಘಟಕ), ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ, ಗೃಯ ರಕ್ಷಕ ದಳ, ಅರಣ್ಯ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, 32ನೇ ಎನ್.ಸಿಮಸಿ. ಬಟಾಲಿಯನ್ ಪಡೆ, ಕೆ.ಸಿ.ಇ.ಡಿ.ಟಿ ಪ್ರೌಢ ಶಾಲೆ, ಭೋಸ್ ಪ್ರಾಥಮಿಕ ಶಾಲೆ, ಕಸ್ತೂರಬಾ ಗಾಂಧಿ ಬಾಲಕೀಯರ ವಸತಿ ಶಾಲೆ ಹೀಗೆ 16 ತುಕಡಿಗಳು ರಾಷ್ರಧ್ವಜಕ್ಕೆ ಮತ್ತು ಅತಿಥಿ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು.
ಅಪ್ಪಾಜಿ ಲಿಂಗೈಕ್ಯ,ಮೌನಾಚರಣೆ :
ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಯಾಗಿದ್ದ ಪೂಜ್ಯ ಶ್ರೀ ಡಾ.ಶರಣಬಸವಪ್ಪ ಅಪ್ಪಾಜಿ ಅವರು ಗುರುವಾರ ರಾತ್ರಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಿಗದಿಯಂತೆ ತಮ್ಮ ಭಾಷಣ ಮಾಡಲಿಲ್ಲ. ಪೂಜ್ಯರ ಗೌರವಾರ್ಥವಾಗಿ ಒಂದು ನಿಮಿಷ ಮೌನಾಚರಣೆ ಕೈಗೊಳ್ಳುವ ಮೂಲಕ ಜ್ಞಾನ ಭಂಡಾರಿಯ ಆತ್ಮಕ್ಕೆ ಶಾಂತಿ ಕೋರಲಾಯಿತು.
ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಕಲಬುರಗಿ ಉತ್ತರ ಶಾಸಕಿ ಮತ್ತು ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಯಮಿತದ ಅಧ್ಯಕ್ಷೆ ಕನೀಜ್ ಫಾತಿಮಾ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಬಾಬುರಾವ ಚಿಂಚನಸೂರು, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಮಹಾನಗರ ಪಾಲಿಕೆ ಮೇಯರ್ ವರ್ಷಾ ಜಾನೆ, ಉಪ ಮೇಯರ್ ತೃಪ್ತಿ ಎಸ್.ಅಲ್ಲದ್ (ಲಾಖೆ), ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಪ್ರಾದೇಶಿಕ ಆಯುಕ್ತೆ ಜಹೀರಾ ನಸ್ಸೀಮ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ,
ಕೆ.ಕೆ.ಆರ್.ಡಿ.ಬಿ. ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್ ಸೇರಿದಂತೆ ಅಧಿಕಾರಿಗಳು, ಸಾರ್ವಜನಿಕರು, ಶಾಲಾ ಮಕ್ಕಳು ಇದ್ದರು.
ಸತ್ಯಂ ಪಿ.ಯು.ಕಾಲೇಜಿನ ಪ್ರಾಚಾರ್ಯ ಬಿ.ಎಚ್.ನಿರಗುಡಿ ಮತ್ತು ಉದನೂರ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕಿ ಸುಜಾತಾ ಪಾಟೀಲ ಅವರು ನಿರೂಪಿಸಿದರು.