ಸೆ. 16 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಅದ್ದೂರಿಯಾಗಿ ಆಚರಣೆ

ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ವಿನಯ ಬಿ ಗುತ್ತೇದಾರ ಹೇಳಿಕೆ

ಕಲಬುರಗಿ : ಸೆ. 16 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಗರದ ಡಾ. ಎಸ್ ಎಂ ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಸಮಿತಿ ಕಾರ್ಯಕ್ರಮದ ಅಧ್ಯಕ್ಷ ವಿನಯ ಬಿ ಗುತ್ತೇದಾರ ಅವರು ತಿಳಿಸಿದರು.

ಅವರು ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಅಂದು ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಶೋಭಾ ಯಾತ್ರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಕಲಬುರಗಿ ನಗರದ ಸರದಾರ ವಲ್ಲಭಾಯಿ ಪಟೇಲ ವೃತ್ತದಿಂದ ಡಾ. ಎಸ್. ಎಂ. ಪಂಡಿತ ರಂಗಮಂದಿರದವರೆಗೆ ಭವ್ಯ ಮೆರವಣಿಗೆ ನಡೆಯುವುದು ಎಂದು ತಿಳಿಸಿದರು.

ಜೀವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಹಾಗೂ ಇತರ ತಜ್ಣರಿಂದ ಉಚಿತ ಕಣ್ಣಿನ ತಪಾಸಣೆ ನಡೆಸಲಾಗುವುದು ಎಂದ ಅವರು, ಶ್ರೀ ನಾರಾಯಣಗುರು ಶಕ್ತಿಪೀಠ ಕರದಾಳ ಪೀಠಾಧಿಪತಿಗಳಾದ ಡಾ. ಪ್ರಣವಾನಂದ ಮಹಾಸ್ವಾಮಿ ಅವರು, 9ನೇ ಮಹಾದಾಸೋಹ ಪೀಠಾಧಿಪತಿಗಳು ಶರಣಬಸವೇಶ್ವರ ಸಂಸ್ಥಾನ ಕಲಬುರಗಿ ಶ್ರೀ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರು, ಸೇರಿದಂತೆ ಜಿಲ್ಲೆಯ ವಿವಿಧ ಮಠದ ಶ್ರೀಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತರಾಜ್, ಐಟಿಬಿಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಸಚಿವ ಶರಣಬಸಪ್ಪ ದರ್ಶನಾಪುರ,ಕೆಕೆಆರ್ಡಿಬಿ ಅಧ್ಯಕ್ಷ ಶಾಸಕ ಡಾ. ಅಜಯಸಿಂಗ್, ಶಾಸಕರಾದ ಅಲಂಪ್ರಭು ಪಾಟೀಲ, ಬಸವರಾಜ ಮತ್ತಿಮೂಡ,ಶಾಸಕಿ ಕನೀಜ್ ಫಾತೀಮಾ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್, ಜಗದೇವ ಗುತ್ತೇದಾರ, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರಾದ ಮಾಲಿಕಯ್ಯ ಗುತ್ತೇದಾರ, ಮಾಜಿ ಶಾಸಕ ಸುಭಾಷ ಆರ್ ಗುತ್ತೇದಾರ, ರಾಜೇಶ ಜಗದೇವ ಗುತ್ತೇದಾರ, ಸೇರಿದಂತೆ ಸಮಾಜದ ಹಿರಿಯರು ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.  ವಿವಿಧ ತಾಲೂಕಿನಿಂದ ನೂರಾರು ಸಂಖ್ಯೆಯಲ್ಲಿ ಜನ ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಅವರು ಮಾಡಿದರು.

ಸುದ್ದಿಗೋಷ್ಟಿಯಲ್ಲಿ ಡಾ‌. ಪ್ರಣವಾನಂದ ಮಹಾಸ್ವಾಮಿಗಳು ಮಾತನಾಡಿ. ಬ್ರಹ್ಮಶ್ರೀ ನಾರಾಯಣ ಗುರುಗಳು ಕೇವಲ ಒಂದು ಜನಾಂಗದ ಗುರುಗಳಲ್ಲ ಅವರು ಮಾನವ ಜನಾಂಗದ ಗುರು, ವಿಶ್ವಮಾನವ ಗುರು, ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಅವರು ಹೇಳಿಕೊಟ್ಟ ಸಂದೇಶಗಳ ಮೂಲಕ ಶಾಂತಿ ಪಥದಲ್ಲಿ ನಡೆಯೋಣ. ಈ ದಾರಿಯಲ್ಲಿ ನಡೆದು ಕೃತಾರ್ಥರಾಗಲು ಪ್ರಯತ್ನಿಸೋಣ ಎಂದು ಹೇಳಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವದ ಅಂಗವಾಗಿ,11 ಜನ ಬಡ ಮಕ್ಕಳಿಗೆ ದತ್ತು ತೆಗೆದುಕೊಳ್ಳುವಂತ ಪುಣ್ಯದ ಕೆಲಸ ನಾವು ಅಂದು ಮಾಡಲಿದ್ದೇವೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಶಿವರಾಜ ಗುತ್ತೇದಾರ ಜೇವರ್ಗಿ,ಜಗದೇವ ಗುತ್ತೇದಾರ ಕಲ್ಲಬೆನೂರ, ಮಲ್ಲಿರ್ಜುನ ಗುತ್ತೇದಾರ, ಕಾಶಿನಾಥ ಗುತ್ತೇದಾರ, ಮಹೇಶ ಗುತ್ತೇದಾರ ಹೋಳಕುಂದ ದೇವೆಂದ್ರ ಗುತ್ತೇದಾರ ಅವರು ಸೇರಿದಂತೆ ಇತರರು ಉಪಸ್ಥಿತಿದರು

Leave a Reply

Your email address will not be published. Required fields are marked *

error: Content is protected !!