ಕಲಬುರಗಿ ; ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಮತ್ತು ಬೆಣ್ಣೆತೊರೆ ಜಲಾಶದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆದಿಂದ ನದಿಯ ಪಾತ್ರದ ಅನೇಕ ಗ್ರಾಮಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ. ನೂರಾರು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಇನ್ನೂ ಕೆಲವಡೆ ಮನೆಗಳಲ್ಲಿ ಮಳೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ವಸ್ತುಗಳು ನಷ್ಟವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು ಚಿತ್ತಾಪುರ ತಾಲೂಕಿನ ಗುಂಡಗುರ್ತಿ, ಬಡವಡಗಿ, ಚಿತ್ತಾಪುರ ಪಟ್ಟಣದ ಬಾರಪೇಟ, ಸೇರಿದಂತೆ ವಿವಿಧಡೆ ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರ ವತಿಯಿಂದ ೫೦೦ ಆಹಾರದ ಕಿಟ್‌ವನ್ನು ವಿತರಣೆ ಮಾಡಲಾಯಿತು. ತಹಸೀಲ್ದಾರರು ನಾಗಯ್ಯ ಹಿರೇಮಠ ಅವರು ಸೇರಿದಂತೆ ಅಧಿಕಾರಿಗಳು ಉಪಸ್ಥಿದರು
ಚಿತ್ತಾಪುರ | ೫೦೦ ಆಹಾರದ ಕಿಟ್ ವಿತರಣೆ
