ಸುರಪುರ: ತಾಲೂಕಿನ ವಾಗಣಗೇರ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ನಗರದ ತಹಸಿಲ್ದಾರ್ ಕಚೇರಿ ಮುಂದೆ ಖಾಲಿ ಕೊಡಗಳೊಂದಿಗೆ ವಾಗಣಗೇರಾ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕರು,ಕಳೆದ ಅನೇಕ ದಿನಗಳಿಮದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ,ಆದರೆ ಗ್ರಾಮ ಪಂಚಾಯತಿ ಅಧಿಕಾರಿಗಳು ಸಮಸ್ಯೆಯ ಬಗ್ಗೆ ಸ್ವಲ್ಪವೂ ಗಮನಹರಿಸುತ್ತಿಲ್ಲ,ಇದರಿಂದ ಬೇಸತ್ತು ಇಂದು ಹೋರಾಟ ಮಾಡುತ್ತಿದ್ದು,ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡದಿದ್ದಲ್ಲಿ ಗ್ರಾಮ ಪಂಚಾಯತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
ವಾರ್ಡ್ ಸಂಖ್ಯೆ ಒಂದರಲ್ಲಿನ ದಲಿತರ ಕೇರಿಯಲ್ಲಿ ಕುಡಿಯುವ ನೀರಿಗಾಗಿ ಸದಾಕಾಲ ಪರದಾಟ ಇದೆ,ಅನೇಕ ಬಾರಿ ಪ್ರತಿಭಟನೆ ಮಾಡಿ ಎಚ್ಚರಿಕೆ ನೀಡಿದರು ನೀರಿನ ವ್ಯವಸ್ಥೆ ಮಾಡುತ್ತಿಲ್ಲ ಎಂದು ಆರೋಪಿಸಿದರು.ನೀರು ಕೊಡುವ ವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು.
ಹೋರಾಟದ ಸ್ಥಳಕ್ಕೆ ತಹಸಿಲ್ದಾರ್ ಹಾಗೂ ತಾಲೂಕ ಪಂಚಾಯತಿ ಅಧಿಕಾರಿಗಳು ಆಗಮಿಸಿ ಪ್ರತಿಭಟನಾಕಾರರ ಮನವಿ ಆಲಿಸಿ,ಶೀಘ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಭರವಸೆ ನೀಡಿದ ನಂತರ ಮನವಿ ಸಲ್ಲಿಸಿ ಪ್ರತಿಭಟನೆ ನಿಲ್ಲಿಸಿದರು.ಪ್ರತಿಭಟನೆಯಲ್ಲಿ ಗ್ರಾಮದ ಅನೇಕ ಜನ ಮುಖಂಡರು ಹಾಗೂ ಮಹಿಳೆಯರು ಖಾಲಿ ಕೊಡಗಳ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸುರಪುರ-ಕುಡಿಯುವ ನೀರಿಗಾಗಿ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ
