ಸುರಪುರ:ಹಾನಗಲ್ಲ ಕುಮಾರ ಶಿವಯೋಗಿ ಜಯಂತಿ ಆಚರಣೆ

ಸುರಪುರ: ನಗರದ ಬಸವ ಭವನದಲ್ಲಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಾಲಯದಲ್ಲಿ ಹಾನಗಲ್ಲ ಕುಮಾರ ಶಿವಯೋಗಿಗಳ ಜಯಂತಿ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಾಸಭಾದ ತಾಲೂಕ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ಹಾನಗಲ್ಲ ಕುಮಾರ ಶಿವಯೋಗಿಗಳು ಸಮಾಜ ಸಂಜೀವಿನಿ ಎಂದು ಪ್ರಖ್ಯಾತರಾದವರು ಅವರ ಆದರ್ಶಗಳನ್ನು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ನೀಡಿದ್ದಾರೆ.ಅವರ ತತ್ವ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಮತ್ತು ಸಾಧನೆಗಳ ಕುರಿತು ಅನೇಕ ಬರಹಗಳು, ಪುಸ್ತಕಗಳು ಪ್ರಕಟಗೊಂಡಿವೆ ಅವುಗಳನ್ನು ಓದಿ ತಿಳಿದುಕೊಂಡು ಇತರರಿಗೂ ತಿಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಪಾಟೀಲ್, ಬಸವೇಶ್ವರ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ವೀರೇಶ ನಿಷ್ಟಿ ದೇಶಮುಖ,ಮುಖಂಡರಾದ ಶಿವಶರಣಪ್ಪ ಹೆಡಿಗನಾಳ್, ಶರಣಬಸವ ಹೂಗಾರ, ಸೇರಿದಂತೆ ಮಹಾಸಭೆಯ ಅನೇಕ ಜನ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!