ಸುರಪುರ: ನಗರದ ಸರ್ದಾರ್ ವಲ್ಲಭಬಾಯ್ ಪಟೇಲ್ ವೃತ್ತದಲ್ಲಿ ತಾಲೂಕ ಆಡಳಿತ ದಿಂದ ಕಲ್ಯಾಣ ಕನಾಟಕ ಉತ್ಸವ ಕಾರ್ಯಕ್ರಮ ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿದರು.
ದೇಶಕ್ಕೆ ೧೯೪೭ ಆಗಸ್ಟ್ ೧೫ರಂದು ಸ್ವಾತಂತ್ರ್ಯ ದೊರಕಿತಾದರೂ ಹೈದರಾಬಾದ್ ಪ್ರಾಂತ್ಯ ವಿಲೀನಕ್ಕೆ ಒಪ್ಪದಿದ್ದಾಗ ನಿಜಾಮರ ವಿರುದ್ಧ ಆಪರೇಷನ್ ಪೊಲೋ ಮಾಡಿ ನಿಜಾಮರ ಸೈನ್ಯವನ್ನು ಹತ್ತಿಕ್ಕುವಲ್ಲಿ ಅನೇಕ ಮಹನಿಯರು ಹೋರಾಟ ತ್ಯಾಗ, ಬಲಿದಾನಗೈದು ನಮ್ಮ ಭಾಗವನ್ನು ಸ್ವಾತಂತ್ರö್ಯಗೊಳಿಸಿದರು ಎಂದರು. ಕಲ್ಯಾಣ ಕರ್ನಾಟಕ ವಿಮೋಚನೆಗಾಗಿ ಹೋರಾಟ ಮಾಡಿದ ಎಲ್ಲ ಮಹನಿಯರು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಉಪ ಖಜಾನಾಧಿಕಾರಿ ಸಣ್ಣಿಕೆಪ್ಪ ಕೊಂಡಿಕಾರ ಅವರು ವಿಶೇಷ ಉಪನ್ಯಾಸ ನೀಡಿ, ಹೈದ್ರಾಬಾದ ಸಂಸ್ಥಾನದ ನಿಜಾಮನ ಆಡಳಿತ ವಿರುದ್ಧ ನಡೆದ ಹೋರಾಟದಲ್ಲಿ ಅನೇಕ ಮಹನೀಯರ ತ್ಯಾಗ ಮತ್ತು ಸಗರನಾಡಿನ ಹೋರಾಟಗಾರರ ಕೊಡುಗೆ, ಸರ್ದಾರ್ ವಲ್ಲಬಾಯ್ ಪಟೇಲ್ ಅವರ ನಿರ್ಧಾರಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ನಗರ ಸಭೆ ಅಧ್ಯಕ್ಷೆ ಹೀನಾ ಕೌಸರ್, ಉಪಾಧ್ಯಕ್ಷ ರಾಜಾ ಪಿಡ್ಡನಾಯಕ (ತಾತಾ),ತಹಸಿಲ್ದಾರ್ ಹುಸೇನಸಾಬ್ ಎ.ಸರಕಾವಸ್,ನಯೋಪ್ರಾ ಅಧ್ಯಕ್ಷ ಪ್ರಕಾಶ ಗುತ್ತೇದಾರ,ಮಾಜಿ ಅಧ್ಯಕ್ಷ ರಾಜಾ ವಾಸುದೇವ ನಾಯಕ,ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್, ನಗರಸಭೆ ಪೌರಾಯುಕ್ತ ಬಸವರಾಜ ಟಣಕೇದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರು, ಪ್ರಮುಖರಾದ ಮಲ್ಲಣ್ಣ ಸಾಹುಕಾರ್, ರಮೇಶ ದೊರೆ ಆಲ್ದಾಳ, ದೊಡ್ಡ ದೇಸಾಯಿ ದೇವರಗೋನಾಲ, ಉಸ್ತಾದ್ ವಜಾಹತ್ ಹುಸೇನ್,ಗೋಪಾಲದಾಸ ಲಡ್ಡಾ,ನಾಸಿರ್ ಕುಂಡಾಲೆ,ಅಬ್ದುಲ್ ಗಫೂರ ನಗನೂರಿ,ಮಹಿಬೂಬ ಒಂಟಿ,ದುರ್ಗಪ್ಪ ಗೋಗಿಕೇರಾ,ನಾಗರಾಜ ಕಲಬುರ್ಗಿ,ವಿರೇಶ ಪಂಚಾAಗಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು,ಶಾಲಾ ಮಕ್ಕಳು, ಶಿಕ್ಷಕರು ಸೇರಿದಂತೆ ಅನೇಕರು ಭಾಗವಹಿಸಿದ್ದರು.


