ವಡಗೇರಾ: ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವವನ್ನೇ ತ್ಯಾಗ ಮಾಡಿದ ಮಹಾನ್ ದೇಶಪ್ರೇಮಿ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಹೆಳಿದರು. ಖಾನಾಪುರ ಗ್ರಾಮದಲ್ಲಿ ಆಗಸ್ಟ್ 15 ಶುಕ್ರವಾರದಂದು ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 228 ನೇ ಜಯಂತಿ ಹಾಗೂ ಸಂಗೊಳ್ಳಿ ರಾಯಣ್ಣರ ನಾಮಫಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣನವರು ಒಂದು ಜಾತಿಗೆ ಸೀಮಿತವಾಗದೆ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಸ್ವಾತಂತ್ರ್ಯ ಸಿಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಇಂದಿನ ಯುವಕರು ಅವರ ತತ್ವ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಬಿಜೆಪಿ ಮುಖಂಡ ರಾಮಲಿಂಗಪ್ಪ ಕೊಂಚೆಟಿ ನೆರವೇರಿಸಿದರು ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸರೋಜಮ್ಮನರಸಪ್ಪ ವಹಿಸಿಕೊಂಡಿದ್ದರು. ಕಾರ್ಯಕ್ರಮಕ್ಕೂ ಮೊದಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಮೆರವಣಿಗೆ ಜರುಗಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ದೇವೇಂದ್ರಪ್ಪ ಮುನಮುಟಗಿ, ಕನಕ ನೌಕರರ ಸಂಘದ ಜಿಲ್ಲಾ ಖಜಾಂಚಿ ದೇವೇಂದ್ರಪ್ಪ ಕರಿಕಳ್ಳಿ ,ಮರಿಲಿಂಗಪ್ಪ ಸಾಹುಕಾರ ಕುಮನೂರ,ಹೊನ್ನಪ್ಪ ದೇವರಳ್ಳಿ,ಯಂಕಪ್ಪ ಮಡಿವಾಳ,ಅಯ್ಯಪ್ಪ ಪದ್ಮಾಕರ್, ಬಸವರಾಜ್ ಕಾವಲಿ, ಹೊನ್ನಪ್ಪ ಹಾಲಗೆರಾ, ಸೂರಪ್ಪ ಹೊಸಬಾವಿ,ಶರಣಪ್ಪ ತಿಪ್ಪನಟಗಿ,ರಾಮು ಪೂಜಾರಿ, ಭೀಮರಾಯ,ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾನ್ ದೇಶಪ್ರೇಮಿ:ಮಲ್ಲಣ್ಣ ಐಕೂರ
