ವಡಗೇರಾ:ಹೈದರಾಬಾದ್ ಕರ್ನಾಟಕ ವಿಮೋಚನೆಯಾಗಲು ಸರ್ದಾರ್ ವಲ್ಲಭಾಯಿ ಪಟೇಲ್ ಸೇರಿದಂತೆ ಈ ಭಾಗದ ಅನೇಕ ಹಿರಿಯ ಹೋರಾಟಗಾರರ ಫಲವಾಗಿ ನಮಗೆ ಇಂದು ಸ್ವಾತಂತ್ರ್ಯ ಸಿಕ್ಕಿದೆ ಎಂದು ಡಿಡಿಯು ಸಿಬಿಎಸ್ಇ ಶಾಲೆಯ ಪ್ರಾಂಶುಪಾಲ ಸಜೀಶ್ ರಾಜ್ ಹೇಳಿದರು. ಪಟ್ಟಣದ ಡಿಡಿಯು ಸಿಬಿಎಸ್ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ನಮ್ಮ ಭಾಗದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಸಮಾಜಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾದದ್ದು ,ದೇಶದ ಅಭಿವೃದ್ಧಿಯಲ್ಲಿ ವಿಶ್ವಕರ್ಮರ ಪಾತ್ರ ಅತ್ಯಂತ ಪ್ರಮುಖವಾದದ್ದು ಎಂದು ಹೇಳಿದರು.ಈ ಸಂದರ್ಭದಲ್ಲಿ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು
ವಡಗೇರಾ ಡಿಡಿಯು ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ
